ಸ್ವಯಂ ಪ್ರೇರಿತ ರಕ್ತದಾನ ಮಾಡಿ ಜೀವ ಉಳಿಸಿ

ಸ್ವಯಂ ಪ್ರೇರಿತ ರಕ್ತದಾನ ಮಾಡಿ ಜೀವ ಉಳಿಸಿಸ್ವಯಂ ಪ್ರೇರಿತ ರಕ್ತದಾನ ಮಾಡಿ ಜೀವ ಉಳಿಸಿ.ರಕ್ತವನ್ನು ಕೃತಕವಾಗಿ ಉತ್ಪಾದಿಸಲು ಸಾಧ್ಯವಿಲ್ಲ. ಜೂನ್ 14 ಅನ್ನು ವಿಶ್ವ ರಕ್ತದಾನಿಗಳ ದಿನವಾಗಿ ಆಚರಿಸಲಾಗುತ್ತದೆ.

ಜಗತ್ತಿನ ಅತಿದೊಡ್ಡ ಸಂಶೊಧನೆ ಎಂದರೆ ಒಬ್ಬ ಮನುಷ್ಯನ ರಕ್ತ ಇನ್ನೊಬ್ಬನ ಜೀವ ಉಳಿಸಲು ಉಪಯೋಗಿಸುವುದು. ಇದರಿಂದ ಹಲವಾರು ಜನರು ಸಾವಿನಿಂದ ಪಾರಾಗಿದ್ದಾರೆ. ಯಾವುದೇ ವ್ಯಕ್ತಿ ಇನ್ನೊಬ್ಬರ ಜೀವ ಉಳಿಸಲು ತನ್ನ ರಕ್ತವನ್ನು ಸ್ವಯಂ ಪ್ರೇರಿತನಾಗಿ ಯಾವಿದೇ ಪ್ರತಿಫಲಾಪೇಕ್ಷೆ ಇಲ್ಲದೇ ಕೊಡುವುದಕ್ಕೆ “ರಕ್ತದಾನ” ಎನ್ನುತ್ತಾರೆ.

ರಕ್ತಕ್ಕೆ ವರ್ಷವಿಡೀ ನಿರಂತರವಾಗಿ ಬೇಡಿಕೆ ಇರುತ್ತದೆ. ಏಕೆಂದರೆ, ಅಪಘಾತಗಳು ಹಾಗೂ ತುರ್ತು ಶಸ್ತ್ರಚಿಕಿತ್ಸೆ ಸಂದರ್ಭಗಳು ಒದಗುತ್ತಲೇ ಇರುತ್ತವೆ. ಜೊತೆಯಲ್ಲಿ, ಕ್ಯಾನ್ಸರ್ ರೋಗಿಗಳು, ಗರ್ಭಿಣಿಯರು, ಥಲಸ್ಸೇಮಿಯಾ, ಹೀಮೋಫೀಲಿಯಾ ಮುಂತಾದ ರೋಗಿಗಳು ರಕ್ತದಾನಿಗಳನ್ನೇ ಅವಲಂಬಿಸಿರುತ್ತಾರೆ.

ನಮ್ಮ ರಾಜ್ಯದಲ್ಲಿ ಒಂದು ದಿನಕ್ಕೆ ಅಂದಾಜು 800 ರಿಂದ 1000 ಯುನಿಟ್ ಗಳಷ್ಟು ರಕ್ತದ ಬೇಡಿಕೆ ಇದೆ, ಆದರೆ ಕೇವಲ ೮೦% ರಷ್ಟು ರಕ್ತ ಮಾತ್ರ ಪೂರೈಕೆಯಾಗುತ್ತಿದೆ. ಆದ್ದರಿಂದ ತುರ್ತು ಸಂದರ್ಭಗಳಲ್ಲಿ ಜನರ ಜೀವ ಉಳಿಸಲು ರಕ್ತದಾನಕ್ಕೆ ಮುಂದಾಗಿ.

ಒಮ್ಮೆ ದಾನಿಗಳಿಂದ ಶೇಖರಿಸಿದ ರಕ್ತ 35 ದಿನಗಳವರೆಗೆ ಮಾತ್ರ ತನ್ನ ಸತ್ವವನ್ನು ಉಳಿಸಿಕೊಂಡಿರುತ್ತದೆ. ಆದ್ದರಿಂದ ಜನರು ಆಗಾಗ ರಕ್ತದಾನ ಮಾಡಿದರೆ ಮಾತ್ರ ನಿರಂತರವಾಗಿ ಅವಶ್ಯಕತೆ ಇರುವವರಿಗೆ ರಕ್ತ ನೀಡಿ ಜೀವ ಉಳಿಸಲು ಸಾಧ್ಯವಾಗುತ್ತದೆ.

ನಿಮಗಿದು ತಿಳಿದಿದೆಯೇ???

1. ರಕ್ತಕ್ಕೆ ಪರ್ಯಾಯವಾದ ವಸ್ತು ಇಲ್ಲ.

2. ರಕ್ತವನ್ನು ಕೃತಕವಾಗಿ ಉತ್ಪಾದಿಸಲು ಸಾಧ್ಯವಿಲ್ಲ.

3. ರಕ್ತವನ್ನು ಮನುಷ್ಯರ ದಾನದಿಂದ ಮಾತ್ರ ಪಡೆಯಬಹುದು.

4. ರಕ್ತದಾನ ಮಾಡುವುದು ಪ್ರತಿ ಆರೋಗ್ಯವಂತ ವ್ಯಕ್ತಿಯ ಕರ್ತವ್ಯವೆಂದು ಭಾವಿಸಿ ಆಗಾಗ ರಕ್ತದಾನ ಮಾಡಿದಲ್ಲಿ ಮಾತ್ರ ರೋಗಗ್ರಸ್ತರು ಮತ್ತು ಗಾಯಗೊಂಡವರನ್ನು ಬದುಕಿಸಲು ಸಾಧ್ಯ.

5. ರಕ್ತದಾನ ಮಾಡಿದ ಕೆಲವೇ ಕ್ಷಣಗಳಲ್ಲಿ ದಾನಿಯ ದೇಹದಲ್ಲಿ ರಕ್ತದ ಉತ್ಪತ್ತಿ ಪ್ರಾರಂಭವಾಗಿ 24 ಘಂಟೆಯ ಒಳಗಾಗಿ ದಾನ ಮಾಡಿದ ಪ್ರಮಾಣದ ರಕ್ತ ದೇಹದಲ್ಲಿ ಪುನರುತ್ಪತ್ತಿಯಾಗುತ್ತದೆ.

ಯಾರು ರಕ್ತದಾನ ಮಾಡಬಹುದು???

ಸ್ವಯಂ ಪ್ರೇರಿತ ರಕ್ತದಾನ ಮಾಡಿ ಜೀವ ಉಳಿಸಿ

1. ಹೆಣ್ಣು ಗಂಡೆಂಬ ಬೇಧವಿಲ್ಲದೇ 18 ರಿಂದ 60 ವರ್ಷದ ಒಳಗಿರುವ ಎಲ್ಲಾ ಆರೋಗ್ಯವಂತ ವ್ಯಕ್ತಿಗಳು ರಕ್ತದಾನ ಮಾಡಬಹುದು.

2. ದಾನಿಯ ದೆಹದ ತೂಕ 50 ಕೆ.ಜಿ ಗಿಂತ ಹೆಚ್ಚಿರಬೇಕು.

3. ರಕ್ತದಲ್ಲಿ ಹೀಮೋಗ್ಲೋಬಿನ್ ಅಂಶ 12 ಗಿಂತ ಮೇಲಿರಬೇಕು.

4. ರಕ್ತದೊತ್ತಡ 110/70 ರಿಂದ 140/100 ವರೆಗೆ ಇರುವವರು ರಕ್ತದಾನ ಮಾಡಬಹುದು.

 ಯಾರು ರಕ್ತದಾನ ಮಾಡಬಾರದು???

1. ಯಾವುದಾದರೂ ಸಾಂಕ್ರಾಮಿಕ ಖಾಯಿಲೆಯಿಂದ ಬಳಲುತ್ತಿದ್ದರೆ ಅಥವಾ ದೀರ್ಘಕಾಲದ ಅನಾರೋಗ್ಯದಿಂದ ನರಳುತ್ತಿದ್ದರೆ ರಕ್ತದಾನ ಮಾಡಬಾರದು.

2. ಮದ್ಯಪಾನ, ಧೂಮಪಾನ ಹಾಗೂ ಮಾದಕ ದ್ರವ್ಯ ಸೇವನೆ ಮಾಡಿದಾಗ ರಕ್ತದಾನ ಮಾಡಬಾರದು.

3. ಮಹಿಳೆಯರು ತಿಂಗಳ ಮುಟ್ಟಿನ ಸಮಯದಲ್ಲಿ, ಗರ್ಭಿಣಿಯಾಗಿರುವಾಗ, ಎದೆಹಾಲುಣಿಸುತ್ತಿರುವಾಗ ಮತ್ತು ಹೆರಿಗೆಯಾದ ನಂತರ 6 ತಿಂಗಳು ರಕ್ತದಾನ ಮಾಡಬಾರದು.

4. ಯಾವುದೇ ವ್ಯಕ್ತಿ ಖಾಯಿಲೆಯ ವಿರುದ್ಧ ಲಸಿಕೆ ಪಡೆದಿದ್ದರೆ, ಅಂಥವರು ಲಸಿಕೆ ಪಡೆದ ನಾಲ್ಕು ವಾರದವರೆಗೆ ರಕ್ತದಾನ ಮಾಡಬಾರದು.

5. ಆಸ್ಪಿರಿನ್ ನಂತಹ ಮಾತ್ರೆಗಳನ್ನು ಸೇವಿಸಿದ್ದರೆ ಅಂತಹ ವ್ಯಕ್ತಿ ಮಾತ್ರೆ ಸೇವಿಸಿದ ನಂತರ 3 ದಿನಗಳವರೆಗೆ ರಕ್ತದಾನ ಮಾಡಬಾರದು.

6. ಕಳೆದ ಮೂರು ತಿಂಗಳಲ್ಲಿ ತಾವೇ ಸ್ವತ: ರಕ್ತ ಅಥವಾ ರಕ್ತದಂಶ ಪಡೆದಿದ್ದರೆ ಅಂಥವರು ರಕ್ತದಾನ ಮಾಡಬಾರದು.

7. ಯಾವುದೇ ದೊಡ್ಡ ಪ್ರಮಾಣದ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರೆ ಅಂಥವರು ಮುಂದಿನ 6 ತಿಂಗಳವರೆಗೆ ರಕ್ತದಾನ ಮಾಡಬಾರದು.

8. ಕ್ಯಾನ್ಸರ್, ಹೃದಯದ ಖಾಯಿಲೆ, ಅಸಹಜ ರಕ್ತಸ್ರಾವ, ಕಾರಣವಿಲ್ಲದೆ ತೂಕ ಕಡಿಮೆಯಾಗುವುದು, ಮಧುಮೇಹ, ಹೆಪಟೈಟಿಸ್ ಬಿ ಮತ್ತು ಸಿ, ಹೆಚ್.ಐ.ವಿ (ಏಡ್ಸ್) ಇರುವವರು ರಕ್ತದಾನ ಮಾಡಬಾರದು.

ರಕ್ತದಾನ ಮಾಡುವುದರಿಂದ ಆಗುವ ಪ್ರಯೋಜನಗಳು...

1. ರಕ್ತದಾನ ಮಾಡುವುದರಿಂದ ದಾನಿಯ ದೇಹದಲ್ಲಿ ಹೊಸ ರಕ್ತ ಉತ್ಪತ್ತಿಯಾಗಲು ಅನುಕೂಲವಾಗುತ್ತದೆ.

2. ದೇಹದಲ್ಲಿ ಹೊಸ ರಕ್ತ ಚಲನೆಯಿಂದ ಕಾರ್ಯತಾತ್ಪರತೆ ಹಾಗೂ ಜ್ಞಾಪಕ ಶಕ್ತಿ ವೃದ್ಧಿಯಾಗುತ್ತದೆ.

3. ರಕ್ತದಲ್ಲಿ ಕೊಬ್ಬಿನಂಶ ಕಡಿಮೆ ಮಾದಲು ಸಹಾಯವಾಗುತ್ತದೆ.

4. ಹೃದಯಾಘಾತವನ್ನು ಶೇ.೮೦ ಕ್ಕಿಂತ ಹೆಚ್ಚು ತಡೆಯಬಹುದು.

5. ಅಧಿಕ ರಕ್ತದೊತ್ತಡವನ್ನು ತಡೆಗಟ್ಟಬಹುದು.

ಆದ್ದರಿಂದ “ರಕ್ತದಾನ ಶ್ರೇಷ್ಠ ದಾನ… ರಕ್ತದಾನ ಮಾಡಿ ಪ್ರಾಣ ಉಳಿಸಿ”

“ರಕ್ತದಾನ ಮಾಡಿದವರೇ ರಕ್ತಸಂಬಂಧಿಗಳು”

ಡಾ. ನಿತಿನ್ ವಿ.-ಪಂಚಕರ್ಮ ವಿಶೇಷಜ್ಞ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಆಸ್ಪತ್ರೆ ಅಂಚೆಪಾಳ್ಯ, ಕುಂಬಳಗೋಡ್ ಪೋಸ್ಟ್, ಬೆಂಗಳೂರು-ಮೈಸೂರು ಹೈವೇ, ಬೆಂಗಳೂರು. ದೂ.: +91 99018 65656, 080-22718025    Email: dr.nitin.v.89@gmail.com

ಡಾ. ನಿತಿನ್ ವಿ.-ಪಂಚಕರ್ಮ ವಿಶೇಷಜ್ಞ
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಆಸ್ಪತ್ರೆ

ಅಂಚೆಪಾಳ್ಯ, ಕುಂಬಳಗೋಡ್ ಪೋಸ್ಟ್, ಬೆಂಗಳೂರು-ಮೈಸೂರು ಹೈವೇ, ಬೆಂಗಳೂರು.

ದೂ.: +91 99018 65656, 080-22718025   

Email: dr.nitin.v.89@gmail.com

 

 

Share this:

Shugreek tablet for diabetes medifield

Share this:

jodarin-pain-gel-medifield

Share this:

Magazines

SUBSCRIBE MAGAZINE

Click Here

error: Content is protected !!