ಯೋಗ ಜೀವನ ಅವಿಭಾಜ್ಯ ಅಂಗವಾಗಲಿ – ದೇಲಂಪಾಡಿ

 ಮಂಗಳೂರು  : ಅಂತರಾಷ್ಟ್ರೀಯ ಯೋಗ ದಿನಾಚರಣೆ ಜೂನ್ 21 ಇದರ ಅಂಗವಾಗಿ ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕರಿಗೆ ಪೂರ್ವಭಾವಿ ಯೋಗ ತರಬೇತಿ ಶಿಬಿರ 3 ದಿನಗಳ ಕಾಲ ನಗರದ ಹಂಪನಕಟ್ಟೆಯ ಶರವು ಮಹಾಗಣಪತಿ ದೇವಸ್ಥನದ ಧ್ಯಾನ ಮಂದಿರದಲ್ಲಿ ದಿನಾಂಕ : 8, 9, 10ರಂದು ನಡೆಯಿತು. ಖ್ಯಾತ ಯೋಗಗುರು ಯೋಗರತ್ನ ಗೋಪಾಲಕೃಷ್ಣ ದೇಲಂಪಾಡಿ ಇದರ ಮಾರ್ಗದರ್ಶನದಲ್ಲಿ ಈ ತರಬೇತಿ ಶಿಬಿರ ನಡೆಯಿತು. ಯೋಗ ಮನುಷ್ಯನ ಆರೋಗ್ಯಕ್ಕೆ ಅತೀ ಅವಶ್ಯಕ.

ದೈಹಿಕ ಆರೋಗ್ಯ ಮತ್ತು ಮಾನಸಿಕ ನೆಮ್ಮದಿಗೆ ಯೋಗವನ್ನು ಪ್ರತಿಯೊಬ್ಬರು ದೈನಂದಿನ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಶ್ರೀ ಗೋಪಾಲಕೃಷ್ಣ ದೇಲಂಪಾಡಿ ಅವರು ಕರೆ ನೀಡಿದರು. ದಿನದ 8 ಗಂಟೆಗಳ ಕಾಲ ನಿಂತುಕೊಂಡು ಒತ್ತಡದ ಕೆಲಸ ಮಾಡುವ ಗೃಹರಕ್ಷಕರಿಗೆ ಯೋಗ ಅತ್ಯಂತ ಅನಿವಾರ್ಯ ಎಂದು ಅವರು ನುಡಿದರು. ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರಾದ ಡಾ|| ಮುರಲೀ ಮೋಹನ್ ಚೂಂತಾರು ಇವರ ನೇತೃತ್ವದಲ್ಲಿ ಈ ಶಿಬಿರ ನಡೆಯಿತು ಸುಮಾರು 25 ಮಂದಿ ಗೃಹರಕ್ಷಕರು ಈ ಶಿಬಿರದಲ್ಲಿ ಭಾಗವಹಿಸಿದರು.

ಜಿಲ್ಲಾಡಳಿತ, ಆಯುಷ್ ಇಲಾಖೆ ಮತ್ತು ಜಿಲ್ಲಾ ಗೃಹರಕ್ಷಕ ದಳದ ಇವರ ಸಹಯೋಗದಲ್ಲಿ ಶ್ರೀ ಗೋಪಾಲಕೃಷ್ಣ ದೇಲಂಪಾಡಿ ಅವರ ಮಾರ್ಗದರ್ಶನದಲ್ಲಿ ಈ ಶಿಬಿರ ಜರುಗಿತು.

Share this:

Shugreek tablet for diabetes medifield

Share this:

jodarin-pain-gel-medifield

Share this:

Magazines

SUBSCRIBE MAGAZINE

Click Here

error: Content is protected !!