ಈರುಳ್ಳಿಯ ಉಪಯೋಗಗಳು ಮತ್ತು ಮನೆ ಮದ್ದು

ಈರುಳ್ಳಿಯನ್ನು ಸರಿಯಾಗಿ ಬಳಸಿಕೊಂಡರೆ ಅದು ಕೇವಲ ತರಕಾರಿಯಲ್ಲಿ ಅದ್ಭುತ ಔಷಧ. ಈರುಳ್ಳಿಯ ಗುಣಗಳು, ಅದರ ಉಪಯೋಗಗಳು ಮತ್ತು ಮನೆ ಮದ್ದುಗಳ ಬಗ್ಗೆ ತಿಳಿದುಕೊಳ್ಳೋಣ.

ನಾವು ನಿತ್ಯವೂ ತಯಾರಿಸುವ ಅಡುಗೆ ಪದಾರ್ಥಗಳಿಗೆ ಈರುಳ್ಳಿಯನ್ನು ಹಾಕದಿದ್ದಾಗ ಒಂದು ರುಚಿಯಾದರೆ ಅದನ್ನು ಹಾಕಿದಾಗ ಆ ಪದಾರ್ಥದ ರುಚಿಯೇ ಬೇರೆಯಾಗುತ್ತದೆ. ಇಂದು ನಾವು ಈರುಳ್ಳಿಯ ಗುಣಗಳು, ಅದರ ಉಪಯೋಗಗಳು ಮತ್ತು ಮನೆ ಮದ್ದುಗಳ ಬಗ್ಗೆ ತಿಳಿದುಕೊಳ್ಳೋಣ. ಆಯುರ್ವೇದದಲ್ಲಿ ಈರುಳ್ಳಿಯ ಬಗ್ಗೆ ವಿಸ್ತೃತ ವಿವರಣೆ ಇದೆ. ಆಯುರ್ವೇದ ಗ್ರಂಥಗಳ ಪ್ರಕಾರ ಈರುಳ್ಳಿಗೆ ಬೆಳ್ಳುಳ್ಳಿಯ ಗುಣಗಳಿವೆ. ಆದರೆ ಬೆಳ್ಳುಳ್ಳಿಯಂತೆ ಇದು ಉಷ್ಣವಲ್ಲ. ಹಾಗಾಗಿ ಬೆಳ್ಳುಳ್ಳಿಯ ಅದ್ಭುತ ಗುಣಗಳನ್ನು ಪಡೆಯಬೇಕು ಎಂದಾದರೆ ಮತ್ತು ಬೆಳ್ಳುಳ್ಳಿಯನ್ನು ಸೇವಿಸಿದರೆ ಉಷ್ಣವಾಗುತ್ತದೆ ಎಂಬ ಯೋಚನೆ ಇದ್ದರೆ ಬದಲಿಗೆ ಈರುಳ್ಳಿಯನ್ನು ಬಳಸಬಹುದು. ಭಾವ ಪ್ರಕಾಶ ನಿಘಂಟು ಎಂಬ ಗ್ರಂಥದಲ್ಲಿ “ಬಲವೀರ್ಯ ಕೈರೋ ಗುರುಃ” ಎಂದಿದ್ದಾರೆ. ಅಂದರೆ ಈರುಳ್ಳಿಯು ದೇಹದ ಬಲವನ್ನು, ವೀರ್ಯದ ಗುಣಮಟ್ಟವನ್ನು, ಲೈಂಗಿಕ ಶಕ್ತಿಯನ್ನು ಹೆಚ್ಚಿಸುತ್ತದೆ ಎಂದರ್ಥ.

erulliya-upayogagalu-mattu-mane-maddu

ಬಹುತೇಕ ಎಲ್ಲಾ ಆಯುರ್ವೇದ ಗ್ರಂಥಗಳಲ್ಲಿಯೂ ಈರುಳ್ಳಿಯಿಂದ ಲೈಂಗಿಕ ಶಕ್ತಿ ವೃದ್ಧಿಯಾಗುತ್ತದೆ ಎಂಬುದನ್ನು ಹೇಳಲಾಗಿದೆ. ಇದು ಚರ್ಮಕ್ಕೆ ಕೂಡ ಅತ್ಯಂತ ಅನುಕೂಲಕರವಾದದ್ದು. ಚರ್ಮವನ್ನು ಸ್ನಿಗ್ಧಗೊಳಿಸಿ ಒರಟುತನವನ್ನು ಹೋಗಲಾಡಿಸುತ್ತದೆ; ಚರ್ಮಕ್ಕೆ ಕಾಂತಿಯನ್ನು ಕೊಡುತ್ತದೆಲ; ಜೊತೆಗೆ ಚರ್ಮದ ಶುದ್ಧಿಯನ್ನೂ ಮಾಡುತ್ತದೆ ಎಂದು ವಿವರಿಸಲಾಗಿದೆ. ಈರುಳ್ಳಿಯನ್ನು ನಿಯಮಿತವಾಗಿ ಸೇವಿಸುವುದರಿಂದ ದೇಹದ ಬಾಹ್ಯ ಮತ್ತು ಆಂತರಿಕ ಕಾಂತಿ ಹೆಚ್ಚುತ್ತದೆ. ಅಂದರೆ ಕೇವಲ ಸೌಂದರ್ಯವೃದ್ಧಿಯಷ್ಟೇ ಅಲ್ಲ ದೇಹದೊಳಗಿನ ರೋಗನಿರೋಧಕ ಶಕ್ತಿ ತುಂಬಾ ಚೆನ್ನಾಗಿ ಹೆಚ್ಚುತ್ತದೆ.

ಈರುಳ್ಳಿಯು ಧ್ವನಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಹೋಗಲಾಡಿಸಿ ಒಳ್ಳೆಯ ಧ್ವನಿಯನ್ನು ನೀಡುತ್ತದೆ ಎಂದು ವಿವರಿಸಲಾಗಿದೆ. ಹೀಗಾಗಿ ಹಾಡುಗಾರರು, ಅಧ್ಯಾಪಕರಂಥವರಿಗೆ ನಿಯಮಿತ ಈರುಳ್ಳಿ ಸೇವನೆ ಅನುಕೂಲಕರ. ಇದು ಕಣ್ಣಿನ ಆರೋಗ್ಯವನ್ನು ಹೆಚ್ಚಿಸುವುದರಿಂದ ಹತ್ತರಿಂದ ಹದಿನೈದು ಮಿಲೀ ಈರುಳ್ಳಿ ರಸವನ್ನು ಸುಮಾರು ಒಂದು ತಿಂಗಳು ದಿನಕ್ಕೊಮ್ಮೆ ಸೇವಿಸುವುದರಿಂದ ಚಿಕ್ಕಪುಟ್ಟ ಕಣ್ಣಿನ ತೊಂದರೆಗಳು ನಿವಾರಣೆಯಾಗುತ್ತವೆ. ಸ್ವಲ್ಪ ಸಿಹಿ ಇರುವ ಅಂದರೆ ಖಾರ ಕಡಿಮೆ ಇರುವ ಈರುಳ್ಳಿಯನ್ನು ಚಿಕ್ಕ ಚಿಕ್ಕ ತುಂಡುಗಳನ್ನಾಗಿ ಕತ್ತರಿಸಿ ತುಪ್ಪದಲ್ಲಿ ಹುರಿದು ನಿಯಮಿತವಾಗಿ ಸೇವಿಸಿದರೆ ಲೈಂಗಿಕ ಶಕ್ತಿಯ ವೃದ್ಧಿಯಾಗುತ್ತದೆ. ಕೂದಲು ಉದುರುವುದನ್ನು ಕಡಿಮೆ ಮಾಡಲು ಈರುಳ್ಳಿಯು ಸಹಕಾರಿ.

ಈರುಳ್ಳಿಯ ರಸ ತೆಗೆದು ತಲೆ ಸ್ನಾನ ಮಾಡುವ ಹತ್ತು ನಿಮಿಷ ಮೊದಲು ಕೂದಲಿನ ಬುಡಕ್ಕೆ ಹಚ್ಚಬೇಕು. ಇದರಿಂದ ಕೂದಲಿನ ಬೆಳವಣಿಗೆ ಚೆನ್ನಾಗಿ ಆಗಲು ಮತ್ತು ಕೂದಲು ಉದುರುವುದು ನಿಲ್ಲಲು ಸಹಾಯವಾಗುತ್ತದೆ. ಬೊಜ್ಜನ್ನು ಕಡಿಮೆ ಮಾಡಲು ಕೂಡ ಈರುಳ್ಳಿಯು ಸಹಕಾರಿ. ಬೆಳ್ಳುಳ್ಳಿಯ ಇನ್ನೊಂದು ಅದ್ಭುತ ಗುಣವೆಂದರೆ ಅದು ನರದ ಶಕ್ತಿಯನ್ನು ಹೆಚ್ಚಿಸುತ್ತದೆ. ಹಾಗಾಗಿ ಸಯಾಟಿಕಾದಂತಹ ಸಮಸ್ಯೆಗಳನ್ನು ಅನುಭವಿಸುತ್ತಿರುವವರಿಗೆ ಈರುಳ್ಳಿ ತುಂಬಾ ಲಾಭದಾಯಕ

ಕಫದ ಸಮಸ್ಯೆಯಿಂದ ಬಳಲುತ್ತಿದ್ದು ಕಫ ಹೊರಗೆ ಬರುತ್ತಿಲ್ಲದಿದ್ದರೆ ಎರಡು ಚಮಚದಷ್ಟು ಈರುಳ್ಳಿ ರಸ, ಅರ್ಧ ಚಮಚದಷ್ಟು ಶುಂಠಿ ರಸ, ಅರ್ಧ ಚಮಚದಷ್ಟು ತುಳಸಿ ಎಲೆಗಳ ರಸ ಮತ್ತು ಒಂದು ಚಮಚ ಜೇನುತುಪ್ಪವನ್ನು ಸೇರಿಸಿ ದಿನಕ್ಕೆ ಒಂದು ಅಥವಾ ಎರಡು ಬಾರಿ ಸೇವಿಸಿದರೆ ಕಫ ಹೊರಗೆ ಬಂದು ಸಮಸ್ಯೆ ನಿವಾರಣೆಯಾಗುತ್ತದೆ.

ಈರುಳ್ಳಿ ಒಳ್ಳೆಯ ಜೀರ್ಣಕಾರಿಯೂ ಹೌದು ಹಾಗಾಗಿ ಅಜೀರ್ಣ ಇರುವವರಿಗೆ ಹೆಚ್ಚಿನ ಪ್ರಮಾಣದಲ್ಲಿ ಈರುಳ್ಳಿಯನ್ನು ಹಾಕಿ ಹೆಸರುಬೇಳೆಯ ತಿಳಿಸಾರು ಮಾಡಿ ಊಟಕ್ಕೆ ನೀಡಿದರೆ ಅಜೀರ್ಣದ ಸಮಸ್ಯೆ ತುಂಬಾ ಚೆನ್ನಾಗಿ ಹತೋಟಿಗೆ ಬರುತ್ತದೆ. ಜೊತೆಗೆ ಶಕ್ತಿ ವೃದ್ಧಿಯೂ ಆಗುತ್ತದೆ. ಒಟ್ಟಿನಲ್ಲಿ ಈರುಳ್ಳಿಯನ್ನು ಸರಿಯಾಗಿ ಬಳಸಿಕೊಂಡರೆ ಅದು ಕೇವಲ ತರಕಾರಿಯಲ್ಲಿ ಅದ್ಭುತ ಔಷಧ.

Dr.venkatramana Hegde Nisargamane Sirsi
ಡಾ||ವೆಂಕಟ್ರಮಣ ಹೆಗಡೆ
ನಿಸರ್ಗಮನೆ,  ಶಿರಸಿ, ಉ.ಕ.
Share this:

Shugreek tablet for diabetes medifield

Share this:

jodarin-pain-gel-medifield

Share this:

Magazines

SUBSCRIBE MAGAZINE

Click Here

error: Content is protected !!