ಹೃದಯ ರೋಗಗಳನ್ನು ತಡೆಗಟ್ಟುವುದು ಹೇಗೆ?

ಭಾರತದಲ್ಲಿ ಹೃದಯಾಘಾತದ ಪ್ರಕರಣಗಳು ತೀವ್ರ ಗತಿಯಲ್ಲಿ ಹೆಚ್ಚಾಗುತ್ತಿದೆ. ಅದರಲ್ಲೂ ಯುವಜನರಲ್ಲಿ ಹೆಚ್ಚುತ್ತಿರುವುದು ತೀವ್ರ ಆತಂಕಕಾರಿ ವಿಷಯ. ಇಂದಿನ ಮಕ್ಕಳಿಗೆ ಶಾಲಾ ದಿನಗಳಿಂದಲೇ ಹೃದಯಘಾತದ ದುಷ್ಪರಿಣಾಮಗಳಿಗೆ ಕಾರಣವಾಗುವ ವಿವಿಧ ಅಂಶಗಳ ಬಗ್ಗೆ ತಿಳಿಸಿ ಅವರನ್ನು ಜಾಗೃತಗೊಳಿಸುವ ಅಗತ್ಯವಿದೆ. ಹೆಚ್ಚಿನ ಹೃದಯಾಘಾತ ಮತ್ತು ಹೃದಯ ಸಂಬಂಧಿ ರೋಗಗಳನ್ನು ಉತ್ತಮ ಜೀವನ ಶೈಲಿ ಮತ್ತು ಆಹಾರ ಪದ್ಧತಿಗಳಿಂದ ತಡೆಗಟ್ಟಬಹುದು.
ಭಾರತದಲ್ಲಿ ಹೃದಯಾಘಾತ ಪ್ರಕರಣಗಳು ಗಮನಾರ್ಹವಾಗಿ ಅಧಿಕವಾಗುತ್ತಿದೆ. ಮುಂಜಾಗ್ರತೆ ಕ್ರಮಗಳನ್ನು ಪರಿಣಾಮಕಾರಿಯಾಗಿಅಳವಡಿಸಿಕೊಳ್ಳುವುದರಿಂದ ಹೃದಯಘಾತವನ್ನು ದೊಡ್ಡ ಮಟ್ಟದಲ್ಲಿ ತಡೆಗಟ್ಟಬಹುದು. ಬದಲಾದ ಜೀವನಶೈಲಿ, ದೈಹಿಕ ಶ್ರಮವಿಲ್ಲದ ದುಡಿಮೆ ಭಾರತೀಯರಲ್ಲಿ ಹೃದಯಾಘಾತದ ಸಾಧ್ಯತಾ ಪ್ರಮಾಣ ಹೆಚ್ಚಿಸಿದೆ. ಆದರೂ ಶೇ. 76ರಷ್ಟುಜನರು ಸಮಸ್ಯೆ ಅಂತಿಮ ಹಂತಕ್ಕೆ ಹೋಗುವ ತನಕ ವೈದ್ಯರ ತಪಾಸಣೆಗೆ ಒಳಗಾಗುತ್ತಿಲ್ಲ. 20 ರಿಂದ 65 ವಯೋಮಾನದ ಶೇ.60ರಷ್ಟು ಭಾರತೀಯರಿಗೆಈ ಕುರಿತು ಸೂಕ್ತ ತಿಳುವಳಿಕೆಯೇ ಇಲ್ಲ.
20ರಿಂದ 30ರ ಹರೆಯದ ಯುವ ಜನತೆ, ತಮಗೆ ಹೃದಯಸಂಬಂಧಿ ಸಮಸ್ಯೆ ಬರುವುದಿಲ್ಲ ಎಂಬ ದೃಢನಂಬಿಕೆಯಲ್ಲಿ ತಪಾಸಣೆಗೆ ಒಳಗಾಗುವುದಿಲ್ಲ, ಆಧುನಿಕ ಜೀವನಶೈಲಿಯು ಯುವಜನತೆಯಲ್ಲಿ ಹೃದಯನಾಳ ತೊಂದರೆ, ಹೃದಯಾಘಾತ, ಪಾಶ್ರ್ವವಾಯು ಸಂಭವವನ್ನು ಮೂರುಪಟ್ಟು ಹೆಚ್ಚಿಸಿದೆ. ಭಾರತದಲ್ಲಿ ಹೃದಯಾಘಾತಸಂಭವದ ವಯೋಮಿತಿಯು 40ರಿಂದ 30 ವರ್ಷಕ್ಕೆ ಇಳಿದಿದೆ. ಇದೊಂದು ಆತಂಕದ ವಿಷಯ.
ಕೂತಲ್ಲೇ ಕೆಲಸ (ಮಾಹಿತಿ ತಂತ್ರಜ್ಞಾನ, ಕಚೇರಿ ಕೆಲಸ); ವಿಶ್ರಾಂತಿರಹಿತ ದುಡಿಮೆ, ದೈಹಿಕ ಚಟುವಟಿಕೆ ಇಲ್ಲದಿರುವುದು, ಧೂಮಪಾನ, ಮದ್ಯಪಾನ ಹವ್ಯಾಸ-ಹೃದಯಾಘಾತ ಹೆಚ್ಚಲು ಪ್ರಮುಖ ಕಾರಣವಾಗಿದೆ. ಒತ್ತಡದ ಜೀವನ, ದೇಹದಲ್ಲಿ ಹೆಚ್ಚಿನ ಕೊಬ್ಬಿನಂಶ, ದೈಹಿಕ ಶ್ರಮ ರಹಿತ ಜೀವನ ಹೃದಯಾಘಾತ ಕೊಡುಗೆ ನೀಡುತ್ತಿದ್ದು ಬೋರಲಾಗಿ ಮಲಗುವವರಲ್ಲೂ ಇದರ ಸಂಭವ ಹೆಚ್ಚಿದೆ. ನಿಯಮಿತವಾಗಿ ದೇಹ ತೂಕದ ತಪಾಸಣೆ, ಕೊಬ್ಬು ರಹಿತ ಪದಾರ್ಥಗಳ ಸೇವನೆ ಹಾಗೂ ಪ್ರತಿದಿನಿತ್ಯ 45 ನಿಮಿಷಗಳ ಕಾಲ ವೇಗದ ನಡಿಗೆ ಮಾಡುವ ಮೂಲಕ ಹೃದಯ ಸಂಬಂಧಿ ರೋಗಗಳನ್ನು ನಿಯಂತ್ರಿಸಬಹುದು.
ಹೃದಯಾಘಾತಕ್ಕೆ ಕಾರಣವಾಗುವ ಕೆಲವು ರಿಸ್ಕ್ ಫ್ಯಾಕ್ಟರ್‍ಗಳು

  • ಧೂಮಪಾನಿಗಳು ಧೂಮಪಾನ ಮಾಡದವರಿಗಿಂತ ಹೃದಯಾಘಾತಕ್ಕೆ ತುತ್ತಾಗುವ ಗಂಡಾಂತರ 3 ರಿಂದ 6 ಪಟ್ಟು ಹೆಚ್ಚಾಗುತ್ತದೆ. ತಂಬಾಕಿನಲ್ಲಿರುವ ನಿಕೋಟಿನ್, ಕಾರ್ಬನ್ ಮೊನೊಕ್ಸೈಡ್ ಮತ್ತು ಇತರೆ ವಿಷಯುಕ್ತ ವಸ್ತುಗಳು ರಕ್ತ ನಾಳ ಗೋಡೆಗೆ ಹಾನಿ ಉಂಟು ಮಾಡುತ್ತವೆ,. ಪ್ಯಾಸಿವ್ ಸ್ಮೋಕರ್ಗಳಲ್ಲೂ (ನೀವು ಧೂಮಪಾನ ಮಾಡದಿದ್ದರೂ, ಧೂಮಪಾನಿಗಳ ಹೊರ ಸೂಸುವ ತಂಬಾಕಿನ ಹೊಗೆಯನ್ನು ಪಕ್ಕದಲ್ಲಿದ್ದು ಸೇವಿಸುವವರು) ಇದು ಅಷ್ಟೇ ಪ್ರಮಾಣದ ಹಾನಿ ಉಂಟು ಮಾಡುತ್ತದೆ
  • ರಕ್ತದಲ್ಲಿ ಕೊಲೆಸ್ಟರಾಲ್ (ಕೊಬ್ಬು) ಪ್ರಮಾಣ ಹೆಚ್ಚಾಗುವುದರಿಂದ ಕರೋನರಿ ಆರ್ಟರಿಗಳು ಗಟ್ಟಿಯಾಗುತ್ತವೆ ಹಾಗೂ ಇದು ಹೃದಯಾಘಾತ ಸಂಭವಿಸುವ ಅವಕಾಶವನ್ನು ಹೆಚ್ಚಿಸುತ್ತದೆ.
  • ರಕ್ತದಲ್ಲಿನ ಅನಿಯಂತ್ರಿತ ಸಕ್ಕರೆ ಪ್ರಮಾಣ ಅತಿರೋಸ್‍ಸ್ಕೆಲೋರಿಸಿಸ್ ಸಮಸ್ಯೆಗೆ ಎಡೆ ಮಾಡಿಕೊಡುತ್ತದೆ ಎಂದು ದೃಢಪಟ್ಟಿದೆ. ಇದರೊಂದಿಗೆ ಹತೋಟಿ ಇಲ್ಲದ ಡಯಾಬಿಟಿಸ್ ಅತಿಯಾದ ತೂಕ ಮತ್ತು ಅಧಿಕ ಕೊಲೆಸ್ಟರಾಲ್‍ಗೆ ಎಡೆ ಮಾಡಿಕೊಡುತ್ತದೆ. ಇವೆಲ್ಲವೂ ಹೃದಯಾಘಾತ ಗಂಡಾಂತರವನ್ನು ಇನ್ನಷ್ಟು ಹೆಚ್ಚಿಸುತ್ತವೆ.
  • ಅಧಿಕ ರಕ್ತದೊತ್ತಡವನ್ನು ನಿಯಂತ್ರಿಸದಿದ್ದರೆ ಅದು ರಕ್ತ ನಾಳಗಳಲ್ಲಿ ಕೊಬ್ಬು ಶೇಖರಣೆಯಾಗಲು ಕಾರಣವಾಗುತ್ತದೆ. ಇದು ಕೇವಲ ಕರೋನರಿ ರಕ್ತ ನಾಳಗಳ ಮೇಲೆ ಮಾತ್ರ ದುಷ್ಪರಿಣಾಮ ಉಂಟು ಮಾಡುವುದಲ್ಲದೇ ಮೆದುಳಿನ ಹಾಗೂ ಮೂತ್ರಪಿಂಡಗಳ ರಕ್ತ ನಾಳಗಳಿಗೂ(ಇದು ಪಾಶ್ರ್ವವಾಯು ಮತ್ತು ಕಿಡ್ನಿ ವೈಫ್ಯಲಕ್ಕೆ ಎಡೆ ಮಾಡಿಕೊಡುತ್ತದೆ). ತೊಂದರೆ ನೀಡುತ್ತದೆ. ಅಧಿಕ ರಕ್ತದೊತ್ತಡದಿಂದ ಹೃದಯ ದೊಡ್ಡದಾಗಿ ಹಾರ್ಟ್ ಆಟ್ಯಾಕ್‍ಗೆ ಕಾರಣವಾಗುತ್ತದೆ.
  • ಅಧಿಕ ತೂಕ ಹೊಂದಿರುವ ವ್ಯಕ್ತಿಗಳಲ್ಲಿ ಹೃದಯಾಘಾತ ಪ್ರಕರಣಗಳು ಹೆಚ್ಚಾಗಿ ಕಂಡು ಬರುತ್ತವೆ. ಸಮೃದ್ದ ಆಹಾರಗಳ (ಕೊಬ್ಬು ಮತ್ತು ಸಕ್ಕರೆ ಅಧಿಕವಾಗಿರುವ ಆಹಾರ ಪದಾರ್ಥಗಳು) ಸೇವನೆ ಹಾಗೂ ವ್ಯಾಯಾಮದ ಕೊರತೆಯಿಂದ ಸಾಮಾನ್ಯವಾಗಿ ತೂಕ ಅತಿಯಾಗಿ ಹೆಚ್ಚಾಗುತ್ತದೆ. ಇದರಿಂದ ರಕ್ತದಲ್ಲಿನ ಕೊಲೆಸ್ಟರಾಲ್ ಪ್ರಮಾಣ ಹೆಚ್ಚಾಗಿ ಅತಿರೋಸ್‍ಸ್ಕೆಲೋರಿಸಿಸ್ ಗಂಡಾಂತರವನ್ನು ಅಧಿಕಗೊಳಿಸುತ್ತದೆ.
  • ದೈಹಿಕ ಜಡತ್ವದ ಐಷಾರಾಮಿ ವ್ಯಕ್ತಿ ಹಾರ್ಟ್ ಆಟ್ಯಾಕ್ ಗಂಡಾಂತರಕ್ಕೆ ಒಳಗಾಗುವ ಸಾಧ್ಯತೆ ತುಂಬಾ ಹೆಚ್ಚಾಗಿರುತ್ತದೆ. ಐಷಾರಾಮಿ ಅಭ್ಯಾಸಗಳು ಮತ್ತು ಸ್ಥೂಲಕಾಯ, ಬೊಜ್ಜು ಹಾಗೂ ಕೊಬ್ಬನ್ನು ಕರಗಿಸುವಲ್ಲಿ ಕಡಿಮೆ ಸಾಮಥ್ರ್ಯಕ್ಕೆ ಕಾರಣವಾಗಿ ಅಧಿಕ ಕೊಲೆಸ್ಟರಾಲ್‍ಗೆ ಎಡೆ ಮಾಡಿಕೊಡುತ್ತದೆ.
  • ಉದ್ವೇಗದಿಂದ ಉಂಟಾಗುವ ಒತ್ತಡ ಮತ್ತು ಆಯಾಸವು ಅತಿರೋಸ್‍ಸ್ಕಲೋರಿಸಿಸ್ ಗಂಡಾಂತರವನ್ನು ಹೆಚ್ಚಿಸುತ್ತದೆ. ಯಾವಾಗಲೂ ಉದ್ವೇಗ, ಒತ್ತಡ, ಕೋಪ, ಆವೇಶಕ್ಕೆ ಒಳಗಾಗುವ ವ್ಯಕ್ತಿಗಳು ಹಾಗೂ ಆತುರದಲ್ಲಿ ಅಂದುಕೊಂಡಿದ್ದನ್ನು ಸಾಧಿಸಲು ತವಕಿಸುವ ಮಂದಿ ಹೃದಯಾಘಾತಕ್ಕೆ ತುತ್ತಾಗುವ ಸಾಧ್ಯತೆ ಹೆಚ್ಚಾಗಿರುತ್ತದೆ.
  • ಕುಟುಂಬದ ಯಾರಾದರೂ ಒಬ್ಬರಿಗೆ ಯೌವ್ವನದಲ್ಲಿ ಹೃದಯಾಘಾತವಾಗಿದ್ದರೆ ಆ ಕುಟಂಬದಲ್ಲಿ ಯಾವುದೇ ವ್ಯಕ್ತಿ ಹಾರ್ಟ್ ಆಟ್ಯಾಕ್‍ಗೆ ಒಳಗಾಗುವ ಸಾಧ್ಯತೆ ಹೆಚ್ಚಾಗಿರುತ್ತದೆ.. ಇಂಥ ವ್ಯಕ್ತಿಗಳು ಆರಂಭಿಕ ವರ್ಷದಲ್ಲೇ ಅಗಾಗ ತಪಾಸಣೆಗೆ ಒಳಗಾಗಬೇಕು.

ಹೃದಯಾಘಾತದ ಸಾಮಾನ್ಯ ಲಕ್ಷಣಗಳು :-

  • ಎದೆನೋವು, ಹೃದಯ ಭಾರವಾಗುವಿಕೆ
  • ಉಸಿರಾಟದಲ್ಲಿ ತೊಂದರೆ
  • ಮಾನಸಿಕ ಕ್ಷೋಭೆ ಅಥವಾ ಒತ್ತಡದಂಥ ಲಕ್ಷಣಗಳು ಗೋಚರಿಸಿದರೂ ಅದನ್ನು ನಿರ್ಲಕ್ಷ ಮಾಡದೇ ವೈದ್ಯರ ಗಮನಕ್ಕೆ ತರಬೇಕು.
  • ಹೆಗಲು, ಭುಜ ಅಥವಾ ದವಡೆ ನೋವು
  • ಅಸ್ವಸ್ಥತೆ
  • ಕಡಿಮೆ ನಾಡಿಮಿಡಿತ
  • ಅತಿಯಾಗಿ ಬೆವರುವಿಕೆ
  • ವಾಂತಿ
  • ತಲೆಸುತ್ತುವಿಕೆ/ಶಿರೋಭ್ರಮಣೆ
  • ಹೃದಯಾಘಾತದ ಚಿಹ್ನೆ ಮತ್ತು ಲಕ್ಷಣಗಳಲ್ಲಿ ವ್ಯತ್ಯಾಸಗಳಿರುತ್ತವೆ. ಒಮ್ಮೊಮ್ಮೆ ಈ ಲಕ್ಷಣ ಬಿರುಸಾಗಿದ್ದರೆ, ಕೆಲವೊಮ್ಮೆ ಲಘುವಾಗಿರುತ್ತದೆ. ಕೆಲವು ಸಂದರ್ಭದಲ್ಲಿ ಯಾವುದೇ ಲಕ್ಷಣವಿಲ್ಲದೇ ಅಥವಾ ಲಘು ಲಕ್ಷಣಗಳೊಂದಿಗೆ ಸಂಭವಿಸುವ ಹಾರ್ಟ್ ಅಟ್ಯಾಕ್ ತೀವ್ರ ಎದೆನೋವಿನಂಥ ಮರಣಾಂತಿಕ ಪರಿಣಾಮಗಳಷ್ಟೇ ಅಪಾಯ ತಂದೊಡ್ಡುತ್ತವೆ
  • ಜಗತ್ತಿನಾದ್ಯಂತ ಕನಿಷ್ಠವೆಂದರೂ 17.5 ಮಿಲಿಯನ್ ಜನರು ಹೃದಯಾಘಾತ ಮತ್ತು ಹೃದಯ ಸಂಬಂಧಿ ರೋಗಗಳಿಂದ ಸಾಯುತ್ತಾರೆ. ಕ್ಯಾನ್ಸರ್, ಏಡ್ಸ್, ಮಲೇರಿಯಾ ಈ ಮೂರು ರೋಗಗಳನ್ನು ಒಟ್ಟು ಸೇರಿಸಿದರೆ ಆಗುವ ವರ್ಷಾವಧಿ ಮರಣದ ಸಂಖ್ಯೆಗಿಂತಲೂ ಹೃದಯ ಸಂಬಂಧಿ ರೋಗಗಳಿಂದ ಉಂಟಾಗುವ ಮರಣ ಹೆಚ್ಚು. ಈ ಹೃದಯ ಸಂಬಂಧಿ ರೋಗಗಳಲ್ಲಿ ಸುಮಾರು 80 ಶೇಕಡಾ ರೋಗವನ್ನು ಪರಿಣಾಮಕಾರಿಯಾಗಿ ತಡೆಗಟ್ಟಬಹುದು ಎಂದು ಸಂಶೋಧನೆಗಳಿಂದ ತಿಳಿದು ಬಂದಿದೆ. ಉತ್ತಮ ವ್ಯಾಯಾಮ, ತಂಬಾಕು ಮತ್ತು ಮಧ್ಯಪಾನ ಸೇವನೆಯನ್ನು ತ್ಯಜಿಸುವುದು, ಉತ್ತಮ ಆಹಾರ ಪದ್ಧತಿ ಹಾಗೂ ಉತ್ತಮ ಜೀವನಶೈಲಿಯನ್ನು ಅಳವಡಿಸಿಕೊಂಡಲ್ಲಿ, ಹೃದಯಾಘಾತದ ಅನುಪಾತವನ್ನು ಪರಿಣಾಮಕಾರಿಯಾಗಿ ಕಡಿಮೆ ಮಾಡಬಹುದು.

ಡಾ. ಮಹಂತೇಶ್ ಆರ್. ಚರಂತಿಮಠ್
ಹೃದ್ರೋಗ ತಜ್ಞರು ತಥಾಗತ್ ಹಾರ್ಟ್‍ಕೇರ್ ಸೆಂಟರ್,
ಮಲ್ಲಿಗೆ ಮೆಡಿಕಲ್ ಸೆಂಟರ್ ಆವರಣ, ನಂ. 31/32, ಕೆಸೆಂಟ್ ರಸ್ತೆ, ಬೆಂಗಳೂರು-01
ಭೇಟಿ ಮಾಡಲು ಸಂಪರ್ಕಿಸಿ : 080-22357777, 9900356000
E-mail: mahanteshrc67@gmail.com

Share this:

Shugreek tablet for diabetes medifield

Share this:

jodarin-pain-gel-medifield

Share this:

Magazines

SUBSCRIBE MAGAZINE

Click Here

error: Content is protected !!