Vydyaloka

ಹೃದಯ ರೋಗಗಳನ್ನು ತಡೆಗಟ್ಟುವುದು ಹೇಗೆ?

ಭಾರತದಲ್ಲಿ ಹೃದಯಾಘಾತದ ಪ್ರಕರಣಗಳು ತೀವ್ರ ಗತಿಯಲ್ಲಿ ಹೆಚ್ಚಾಗುತ್ತಿದೆ. ಅದರಲ್ಲೂ ಯುವಜನರಲ್ಲಿ ಹೆಚ್ಚುತ್ತಿರುವುದು ತೀವ್ರ ಆತಂಕಕಾರಿ ವಿಷಯ. ಇಂದಿನ ಮಕ್ಕಳಿಗೆ ಶಾಲಾ ದಿನಗಳಿಂದಲೇ ಹೃದಯಘಾತದ ದುಷ್ಪರಿಣಾಮಗಳಿಗೆ ಕಾರಣವಾಗುವ ವಿವಿಧ ಅಂಶಗಳ ಬಗ್ಗೆ ತಿಳಿಸಿ ಅವರನ್ನು ಜಾಗೃತಗೊಳಿಸುವ ಅಗತ್ಯವಿದೆ. ಹೆಚ್ಚಿನ ಹೃದಯಾಘಾತ ಮತ್ತು ಹೃದಯ ಸಂಬಂಧಿ ರೋಗಗಳನ್ನು ಉತ್ತಮ ಜೀವನ ಶೈಲಿ ಮತ್ತು ಆಹಾರ ಪದ್ಧತಿಗಳಿಂದ ತಡೆಗಟ್ಟಬಹುದು.
ಭಾರತದಲ್ಲಿ ಹೃದಯಾಘಾತ ಪ್ರಕರಣಗಳು ಗಮನಾರ್ಹವಾಗಿ ಅಧಿಕವಾಗುತ್ತಿದೆ. ಮುಂಜಾಗ್ರತೆ ಕ್ರಮಗಳನ್ನು ಪರಿಣಾಮಕಾರಿಯಾಗಿಅಳವಡಿಸಿಕೊಳ್ಳುವುದರಿಂದ ಹೃದಯಘಾತವನ್ನು ದೊಡ್ಡ ಮಟ್ಟದಲ್ಲಿ ತಡೆಗಟ್ಟಬಹುದು. ಬದಲಾದ ಜೀವನಶೈಲಿ, ದೈಹಿಕ ಶ್ರಮವಿಲ್ಲದ ದುಡಿಮೆ ಭಾರತೀಯರಲ್ಲಿ ಹೃದಯಾಘಾತದ ಸಾಧ್ಯತಾ ಪ್ರಮಾಣ ಹೆಚ್ಚಿಸಿದೆ. ಆದರೂ ಶೇ. 76ರಷ್ಟುಜನರು ಸಮಸ್ಯೆ ಅಂತಿಮ ಹಂತಕ್ಕೆ ಹೋಗುವ ತನಕ ವೈದ್ಯರ ತಪಾಸಣೆಗೆ ಒಳಗಾಗುತ್ತಿಲ್ಲ. 20 ರಿಂದ 65 ವಯೋಮಾನದ ಶೇ.60ರಷ್ಟು ಭಾರತೀಯರಿಗೆಈ ಕುರಿತು ಸೂಕ್ತ ತಿಳುವಳಿಕೆಯೇ ಇಲ್ಲ.
20ರಿಂದ 30ರ ಹರೆಯದ ಯುವ ಜನತೆ, ತಮಗೆ ಹೃದಯಸಂಬಂಧಿ ಸಮಸ್ಯೆ ಬರುವುದಿಲ್ಲ ಎಂಬ ದೃಢನಂಬಿಕೆಯಲ್ಲಿ ತಪಾಸಣೆಗೆ ಒಳಗಾಗುವುದಿಲ್ಲ, ಆಧುನಿಕ ಜೀವನಶೈಲಿಯು ಯುವಜನತೆಯಲ್ಲಿ ಹೃದಯನಾಳ ತೊಂದರೆ, ಹೃದಯಾಘಾತ, ಪಾಶ್ರ್ವವಾಯು ಸಂಭವವನ್ನು ಮೂರುಪಟ್ಟು ಹೆಚ್ಚಿಸಿದೆ. ಭಾರತದಲ್ಲಿ ಹೃದಯಾಘಾತಸಂಭವದ ವಯೋಮಿತಿಯು 40ರಿಂದ 30 ವರ್ಷಕ್ಕೆ ಇಳಿದಿದೆ. ಇದೊಂದು ಆತಂಕದ ವಿಷಯ.
ಕೂತಲ್ಲೇ ಕೆಲಸ (ಮಾಹಿತಿ ತಂತ್ರಜ್ಞಾನ, ಕಚೇರಿ ಕೆಲಸ); ವಿಶ್ರಾಂತಿರಹಿತ ದುಡಿಮೆ, ದೈಹಿಕ ಚಟುವಟಿಕೆ ಇಲ್ಲದಿರುವುದು, ಧೂಮಪಾನ, ಮದ್ಯಪಾನ ಹವ್ಯಾಸ-ಹೃದಯಾಘಾತ ಹೆಚ್ಚಲು ಪ್ರಮುಖ ಕಾರಣವಾಗಿದೆ. ಒತ್ತಡದ ಜೀವನ, ದೇಹದಲ್ಲಿ ಹೆಚ್ಚಿನ ಕೊಬ್ಬಿನಂಶ, ದೈಹಿಕ ಶ್ರಮ ರಹಿತ ಜೀವನ ಹೃದಯಾಘಾತ ಕೊಡುಗೆ ನೀಡುತ್ತಿದ್ದು ಬೋರಲಾಗಿ ಮಲಗುವವರಲ್ಲೂ ಇದರ ಸಂಭವ ಹೆಚ್ಚಿದೆ. ನಿಯಮಿತವಾಗಿ ದೇಹ ತೂಕದ ತಪಾಸಣೆ, ಕೊಬ್ಬು ರಹಿತ ಪದಾರ್ಥಗಳ ಸೇವನೆ ಹಾಗೂ ಪ್ರತಿದಿನಿತ್ಯ 45 ನಿಮಿಷಗಳ ಕಾಲ ವೇಗದ ನಡಿಗೆ ಮಾಡುವ ಮೂಲಕ ಹೃದಯ ಸಂಬಂಧಿ ರೋಗಗಳನ್ನು ನಿಯಂತ್ರಿಸಬಹುದು.
ಹೃದಯಾಘಾತಕ್ಕೆ ಕಾರಣವಾಗುವ ಕೆಲವು ರಿಸ್ಕ್ ಫ್ಯಾಕ್ಟರ್‍ಗಳು

ಹೃದಯಾಘಾತದ ಸಾಮಾನ್ಯ ಲಕ್ಷಣಗಳು :-

ಡಾ. ಮಹಂತೇಶ್ ಆರ್. ಚರಂತಿಮಠ್
ಹೃದ್ರೋಗ ತಜ್ಞರು ತಥಾಗತ್ ಹಾರ್ಟ್‍ಕೇರ್ ಸೆಂಟರ್,
ಮಲ್ಲಿಗೆ ಮೆಡಿಕಲ್ ಸೆಂಟರ್ ಆವರಣ, ನಂ. 31/32, ಕೆಸೆಂಟ್ ರಸ್ತೆ, ಬೆಂಗಳೂರು-01
ಭೇಟಿ ಮಾಡಲು ಸಂಪರ್ಕಿಸಿ : 080-22357777, 9900356000
E-mail: mahanteshrc67@gmail.com

Share this: