ರಾಜ್ಯದ ಕ್ರೀಡಾಪಟುಗಳ ಆರೋಗ್ಯ ರಕ್ಷಣೆಗೆ ತಜ್ಞರ ಮಾರ್ಗದರ್ಶನ – ಸಚಿವ ಡಾ||ಕೆ.ಸುಧಾಕರ್.

ರಾಜ್ಯದ ಕ್ರೀಡಾಪಟುಗಳ ಆರೋಗ್ಯ ರಕ್ಷಣೆಗೆ ತಜ್ಞರ ಮಾರ್ಗದರ್ಶನ – ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ||ಕೆ.ಸುಧಾಕರ್.

ಬೆಂಗಳೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅಧೀನದಲ್ಲಿ ಬರುವ ಕರ್ನಾಟಕ ರಾಜ್ಯದಲ್ಲಿನ 34 ಕ್ರೀಡಾ ವಸತಿ ನಿಲಯದ ಕ್ರೀಡಾಪಟುಗಳಿಗೆ ವೈದ್ಯಕೀಯ ಸೌಲಭ್ಯವನ್ನು ಒದಗಿಸುವ ಸಲುವಾಗಿ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ, ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ, ಬೆಂಗಳೂರು ಮತ್ತು ಕ್ರೀಡಾ ವಿಜ್ಞಾನ ಕೇಂದ್ರ ಇವರುಗಳ ನಡುವೆ  ಒಪ್ಪಂದಕ್ಕೆ ಸಹಿ  ಮಾಡಲಾಗಿದೆ.

ರಾಜ್ಯದ ಕ್ರೀಡಾಪಟುಗಳ ಆರೋಗ್ಯ ರಕ್ಷಣೆಗೆ ತಜ್ಞರ ಮಾರ್ಗದರ್ಶನ – ಸಚಿವ ಡಾ||ಕೆ.ಸುಧಾಕರ್.

ದಿನಾಂಕ: 15.04.2021 ರಂದು ಪೂರ್ವಾಹ್ನ 11:00 ಗಂಟೆಗೆ ವಿಕಾಸ ಸೌಧದ 3 ನೇ ಮಹಡಿಯಲ್ಲಿರುವ ಕೊಠಡಿ ಸಂಖ್ಯೆ 318 ರಲ್ಲಿ ಡಾ||ಕೆ.ಸುಧಾಕರ್‌, ಗೌರವಾನ್ವಿತ ಸಚಿವರು, ಆರೋಗ್ಯ & ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ, ಕರ್ನಾಟಕ ಸರ್ಕಾರ ಹಾಗೂ ವಿಶ್ವವಿದ್ಯಾಲಯದ ಸಮಕುಲಾಧಿಪತಿಗಳು ಒಪ್ಪಂದಕ್ಕೆ ಅಧೀಕೃತವಾಗಿ ಚಾಲನೆ ನೀಡಿದರು. ಕ್ರೀಡಾಪಟುಗಳ ಯಶಸ್ಸಿಗೆ ಅವರ ಆರೋಗ್ಯ ಅತ್ಯಂತ ಮುಖ್ಯವಾಗಿದ್ದು, ಈ ಒಪ್ಪಂದದಿಂದ ಅವರಿಗೆ ವಿಶೇಷ ಸೌಲಭ್ಯ ದೊರೆಯಲಿದೆ ಎಂದು ಮಾನ್ಯ ಸಚಿವರು ವಿವರಿಸಿದರು. ಈ ಒಪ್ಪಂದವು ಐತಿಹಾಸಿಕ ಒಪ್ಪಂದವಾಗಿದ್ದು, ಗ್ರಾಮೀಣ ಭಾಗದಿಂದ ವಿದ್ಯಾರ್ಥಿಗಳಿಗೆ ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಲು ಈ ಯೋಜನೆ ಸಹಕಾರಿಯಾಗಲಿದೆ.

ಡಾ|| ನಾರಾಯಣ ಗೌಡ, ಗೌರವಾನ್ವಿತ ಸಚಿವರು, ಯುವ ಸಬಲೀಕರಣ ಮತ್ತು ಕ್ರೀಡೆ ಹಾಗೂ ಯೋಜನೆ ಹಾಗೂ ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆ, ಕರ್ನಾಟಕ ಸರ್ಕಾರ ರವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಈ ಕಾರ್ಯಕ್ರಮದಲ್ಲಿ ಡಾ||ಎಸ್. ಸಚ್ಚಿದಾನಂದ , ಗೌರವಾನ್ವಿತ ಕುಲಪತಿಗಳು, ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ, ಕರ್ನಾಟಕ, ಬೆಂಗಳೂರು, ಶ್ರೀ.ರವೀಂದ್ರ, ಮಾನ್ಯ ಆಯುಕ್ತರು, ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಡಾ||ಎನ್. ರಾಮಕೃಷ್ಣರೆಡ್ಡಿ, ಮಾನ್ಯ ಕುಲಸಚಿವರು, ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ, ಕರ್ನಾಟಕ, ಬೆಂಗಳೂರು, ಡಾ||ಬಿ.ವಸಂತ ಶೆಟ್ಟಿ, ಉಪಕುಲಸಚಿವರು, ಹಾಗೂ ಕ್ರೀಡಾ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.

Share this:

Shugreek tablet for diabetes medifield

Share this:

jodarin-pain-gel-medifield

Share this:

Magazines

SUBSCRIBE MAGAZINE

Click Here

error: Content is protected !!