Vydyaloka

ಮಹಿಳೆಯರೇ ಹೃದಯ ಸಂಬಂಧಿ ಸಮಸ್ಯೆ ನಿರ್ಲಕ್ಷಿಸದಿರಿ

ಮಹಿಳೆಯರಲ್ಲಿ ಹೃದಯಕ್ಕೆ ಸಂಬಂಧಪಟ್ಟ ಕಾಯಿಲೆಗಳು ಕಡಿಮೆ ಎಂದು ಜನರು ಭಾವಿಸುತ್ತಾರೆ. ಆದರೆ ಇದು ಸ್ತನ ಕ್ಯಾನ್ಸರಿಗಿಂತಲೂ ಹೆಚ್ಚಿನ ಪ್ರಮಾಣದಲ್ಲಿ ಮಹಿಳೆಯರನ್ನು ತೊಂದರೆಗೀಡು ಮಾಡುತ್ತಿದೆ.ಮಹಿಳೆಯರಲ್ಲಿ ಮಾಸಿಕ ಋತು ಕೊನೆಗೊಳ್ಳುವ ತನಕ (ಮೆನೊಪಾಸ್) ಅವರಿಗೆ ಸಾಮಾನ್ಯವಾಗಿ ಹೃದಯಾಘಾತದಿಂದ ರಕ್ಷಣೆ ದೊರೆಯುತ್ತದೆ. ಆದರೆ, ಮಹಿಳೆಯರು ದೀರ್ಘಕಾಲ ಗರ್ಭ ನಿರೋಧಕ ಮಾತ್ರೆಗಳನ್ನು ಸೇವಿಸಿದರೆ ಮತ್ತು ತಂಬಾಕು ಉಪಯೋಗಿಸಿದರೆ ಈ ರಕ್ಷಣೆ ಕೊನೆಗೊಳ್ಳುತ್ತದೆ. ಪುರುಷರು ತಮ್ಮ ಹೃದಯದಲ್ಲಿ ಸಣ್ಣಪುಟ್ಟ ವ್ಯತ್ಯಾಸವಾದರೂ ತಕ್ಷಣವೇ ಮನೆಯವರ ಗಮನಕ್ಕೆ ತರುತ್ತಾರೆ, ವೈದ್ಯರ ಬಳಿ ಧಾವಿಸುತ್ತಾರೆ. ಆದರೆ ಮಹಿಳೆ ಮಾತ್ರ ಹಾಗೆ ಮಾಡುವುದಿಲ್ಲ. ಆಕೆ ಹೃದಯದಲ್ಲಿ ಉಂಟಾಗುವ ಸಣ್ಣಪುಟ್ಟ ನೋವುಗಳನ್ನು ಹೇಳಿಕೊಳ್ಳುವುದೇ ಇಲ್ಲ.
ಮನೆಯವರೆಲ್ಲರ ಕಾಳಜಿವಹಿಸುವ ಮಹಿಳೆ ತನ್ನಹೃದಯಕ್ಕೆ ಸಂಬಂಧಪಟ್ಟ ತೊಂದರೆಗಳನ್ನು ನಿರ್ಲಕ್ಷಿಸಿಬಿಡುತ್ತಾಳೆ. ಹೃದಯ ಕಾಯಿಲೆಗೆ ಸಂಬಂಧಪಟ್ಟ ಲಕ್ಷಣಗಳನ್ನು ನಿರ್ಲಕ್ಷಿಸಿದರೆ, ಒಮ್ಮೆ ಅದರ ಆಘಾತಕ್ಕೆ ಸಿಲುಕಿದರೆ ಮುಂಬರುವ ವರ್ಷಗಳಲ್ಲಿ ಅವಳ ದುಡಿಯುವ ಶಕ್ತಿಸಹ ಕಡಿಮೆಯಾಗಿ ಬಿಡುತ್ತದೆ.ಕೆಲವು ತಿಂಗಳ ಮುಂಚೆಯೇ ಹೃದಯದಲ್ಲಿ ಸಣ್ಣಪುಟ್ಟ ನೋವು ಎನಿಸಬಹುದು. ಭುಜದ ಭಾಗದಲ್ಲಿ ನೋವು ಇರಬಹುದು. ಇವೆಲ್ಲ ಲಕ್ಷಣಗಳು ಕಂಡುಬಂದಾಗ ತಕ್ಷಣವೇ ವೈದ್ಯರಿಂದ ತಪಾಸಣೆ ಗೊಳಗಾಗಬೇಕು. ಬೇಗ ಚಿಕಿತ್ಸೆ ಪಡೆದರೆ ಮುಂಬರುವ ಜೀವನದ ಗುಣಮಟ್ಟವನ್ನು ಹೆಚ್ಚಿಸಿಕೊಳ್ಳಬಹುದು. ಪುರುಷ ಹಾಗೂ ಮಹಿಳೆಯರಲ್ಲಿ ಹೃದ್ರೋಗದ ಲಕ್ಷಣಗಳು ಸ್ವಲ್ಪ ಭಿನ್ನರೀತಿಯಲ್ಲಿ ಗೋಚರಿಸುತ್ತವೆ.
ಪುರುಷನಿಗೆ ಹೃದಯದಲ್ಲಿ ಒಮ್ಮೆಲೆ ಹಿಂಡಿದಂತೆ ನೋವು ಉಂಟಾದರೆ, ಮಹಿಳೆಯರಲ್ಲಿ ಚಿಕ್ಕಚಿಕ್ಕ ರಕ್ತನಾಳಗಳಲ್ಲಿ ಅಡೆತಡೆ ಉಂಟಾಗಿ ಹೃದ್ರೋಗಕ್ಕೆ ಕಾರಣವಾಗುತ್ತದೆ. ಹಾಗೆ ನೋಡಿದರೆ ಪುರುಷರಿಗಿಂತ ಹೆಚ್ಚಾಗಿ ಮಹಿಳೆಯರಲ್ಲಿಯೇ ಹೃದಯದ ತೊಂದರೆಗಳು ಹೆಚ್ಚಿನ ಪ್ರಮಾಣದಲ್ಲಿ ಕಾಣಿಸಿಕೊಳ್ಳುತ್ತವೆ.35ರ ಬಳಿಕ ಮಹಿಳೆಯರಲ್ಲಿ ಯಾವುದೇ ವಯಸ್ಸಿನಲ್ಲಾದರೂ ಹೃದಯದ ಕಾಯಿಲೆಗಳು ಕಾಣಿಸಿಕೊಳ್ಳಬಹುದು. ಮುಟ್ಟು ನಿಂತ ಮಹಿಳೆಯರಲ್ಲಿ ಇದರ ಪ್ರಮಾಣ ಸ್ವಲ್ಪಜಾಸ್ತಿ. ಹಾರ್ಮೋನುಗಳ ರಕ್ಷಣೆ ಇರದೇ ಇರುವುದರಿಂದ ಈ ಸ್ಥಿತಿ ಉಂಟಾಗಬಹುದು
ಹೃದಯಾಘಾತ ಎನ್ನುವುದು ಬಹಳ ಶಕ್ತಿಶಾಲಿಯಾದ ರೋಗ ಮತ್ತು ಇದಕ್ಕೆ ಕೊಲ್ಲುವ ಶಕ್ತಿ ಬಹಳ ಅಧಿಕವಾಗಿರುತ್ತದೆ. ಒಂದು ವೇಳೆ ಬದುಕಿ ಉಳಿದರೂ ಮಾನಸಿಕ ಸಾಮಥ್ರ್ಯವನ್ನು ಕುಗ್ಗಿಸುತ್ತದೆ. ಶಸ್ತ್ರ ಚಿಕಿತ್ಸೆ ಮಾಡಿದರೂ, ಮಾನಸಿಕವಾಗಿ ಉಡುಗಿ ಹೋಗಿ ಮೊದಲಿನಂತೆ ಪರಿಣಾಮಕಾರಿಯಾಗಿ ಕೆಲಸಮಾಡಲು ಹೆಚ್ಚು ಸಮಯ ತೆಗೆದು ಕೊಳ್ಳಬಹುದು. ಭಾರತದಲ್ಲಿ ಹೃದಯಾಘಾತದ ಪ್ರಕರಣಗಳು ತೀವ್ರ ಗತಿಯಲ್ಲಿ ಹೆಚ್ಚಾಗುತ್ತಿದೆ.

ಹೃದಯಾಘಾತಕ್ಕೆ ಕಾರಣವಾಗುವ ಕೆಲವು ರಿಸ್ಕ್ ಫ್ಯಾಕ್ಟರ್‍ಗಳು:

ಯಾರಲ್ಲಿ ಹೃದಯರೋಗದ ಅಪಾಯ ?

ಮುನ್ನೆಚ್ಚರಿಕೆ ವಹಿಸುವುದು ಹೇಗೆ?

ಜನರು ಹೆಚ್ಚು ಆಲಸಿಗಳಾಗಿ ದೈಹಿಕ ಕಸರತ್ತನ್ನು ಕಡಿಮೆಯಾಗಿ, ಮಾನಸಿಕ ಒತ್ತಡ ಜಾಸ್ತಿಯಾಗಿ ಹೊಸಹೊಸ ರೋಗಗಳು ಹುಟ್ಟ ತೊಡಗಿದೆ ಮತ್ತು ಹೃದಯ ಸಂಬಂಧಿರೋಗÀಗಳು ಬಹುಮುಖ್ಯ ರೋಗವಾಗಿ ಹೊರಹೊಮ್ಮಿದೆ. ಅಂಕಿ ಅಂಶಗಳ ಪ್ರಕಾರ ವಿಶ್ವದ ಹೃದಯರೋಗಿಗಳ ಸಂಖ್ಯೆಯ ಮೂರನೇ ಒಂದಂಶದಷ್ಟು ಭಾರತವೊಂದರಿಂದಲೇ ಸಿಗುತ್ತದೆ ಎಂದು ಅಂದಾಜಿಸಲಾಗಿದೆ. ಮೊದಲೇ ಬಡತನ, ಅನಕ್ಷರತೆ ಮೂಡನಂಬಿಕೆಗಳ ಬೀಡಾಗಿರುವ ಭಾರತ ದೇಶಕ್ಕೆ ಬದಲಾಗುತ್ತಿರುವ ಕಾಲಘಟ್ಟದಲ್ಲಿ ಆಧುನೀಕರಣ, ವ್ಯಾಪಾರೀಕರಣ, ಕೈಗಾರೀಕರಣ ಮತ್ತು ಕಲುಷಿತ ವಾತಾವರಣದಿಂದಾಗಿ ಹೃದಯ ಸಂಬಂಧಿ ರೋಗಗಳು ಬಹು ದೊಡ್ಡ ಸಮಸ್ಯೆಯಾಗಿ ಬೆಳೆದು ನಿಂತಲ್ಲಿ ಅಶ್ಚರ್ಯವೇನಿಲ್ಲ.

 

 

ಡಾ. ಮಹಂತೇಶ್ ಆರ್. ಚರಂತಿಮಠ್
ಹೃದ್ರೋಗ ತಜ್ಞರು ತಥಾಗತ್ ಹಾರ್ಟ್‍ಕೇರ್ ಸೆಂಟರ್,
ಮಲ್ಲಿಗೆ ಮೆಡಿಕಲ್ ಸೆಂಟರ್ ಆವರಣ, ನಂ. 31/32, ಕೆಸೆಂಟ್ ರಸ್ತೆ, ಬೆಂಗಳೂರು-01
ಭೇಟಿ ಮಾಡಲು ಸಂಪರ್ಕಿಸಿ : 080-22357777, 9900356000
E-mail: mahanteshrc67@gmail.com

Share this: